ವಿಜಯಸಿರಿನ್ಯೂಸ್.ಕಾಂ/ ಹರಪನಹಳ್ಳಿ
ದೇಶದ ೭೯ನೇ ಸ್ವಾತಂತ್ರö್ಯ ದಿನಾಚರಣೆಯ ಅಂಗವಾಗಿ ವಿಜಯನಗರ ಜಿಲ್ಲೆಯ ಎಲ್ಲಾ ಶಾಲಾ- ಕಾಲೇಜುಗಳಲ್ಲಿ ಹಮ್ಮಿಕೊಂಡಿರುವ ನಶಮುಕ್ತ ಭಾರತ ಅಭಿಯಾನದ ಹಿನ್ನೆಲೆಯಲ್ಲಿ ಬುಧವಾರ ನಗರದ ಎಸ್‌ಯುಜೆಎಂ ಪದವಿಪೂರ್ವ ಕಾಲೇಜು ಆವರಣದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಸೇವನೆಯ ಸಹವಾಸ ಹಾಗೂ ಅದರಿಂದಾಗುವ ದುಷ್ಪರಿಣಾಮ, ಅದರಿಂದ ಸಂಭವಿಸುವ ಸಾಮಾಜಿಕ ಅನಾಹುತಗಳ ಕುರಿತಂತೆ ವಿದ್ಯಾರ್ಥಿಗಳಿಗೆ ಸಮಗ್ರ ಮಾಹಿತಿ ನೀಡಲಾಯಿತು.

ಇದೇ ಸಂದರ್ಭದಲ್ಲಿ ನಶಮುಕ್ತ ಭಾರತವನ್ನು ಕಟ್ಟುವ ಹಿನ್ನೆಲೆಯಲ್ಲಿ ಯುವಸಮುದಾಯದ ಭಾಗವಾದ ನಾವು ಮಾದಕವಸ್ತುಗಳ ಸೇವನೆಯಿಂದ ದೂರ ಇರುತ್ತೇವೆ ಎಂದು ನಶಮುಕ್ತ ಭಾರತ ಅಭಿಯಾನದ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು. ಕಾಲೇಜಿನ ವಿದ್ಯಾರ್ಥಿಗಳು ಪ್ರತಿಜ್ಞಾವಿಧಿ ಸ್ವೀಕರಿಸಿದರು.
ಇದನ್ನೂ ಓದಿ: ಕಲ್ಲೆದೇವರ ಗ್ರಾಮದಲ್ಲಿ ಗ್ರಂಥಾಲಯ ಪಿತಾಮಹ ಡಾ. ರಂಗನಾಥನ್ ಜಯಂತ್ಯುತ್ಸವ
ವಿಜಯನಗರ ಜಿಲ್ಲಾ ಪಂಚಾಯ್ತಿ ಉಪಕಾರ್ಯದರ್ಶಿ ತಿಮ್ಮಪ್ಪ, ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿ ವೈ.ಎಚ್. ಚಂದ್ರಶೇಖರ್, ಕ್ಷೇತ್ರ ಶಿಕ್ಷಣಾಧಿಕಾರಿ ಲೇಪಾಕ್ಷಪ್ಪ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಿಡಿಪಿಒ ಜಿ.ಟಿ. ಅಶೋಕ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಪೃಥ್ವಿ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಅಭಿಯಾನದಲ್ಲಿ ಪಾಲ್ಗೊಂಡಿದ್ದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಭಾರ ಪ್ರಾಂಶುಪಾಲ ಕೃಷ್ಣಮೂರ್ತಿ, ಉಪನ್ಯಾಸಕರಾದ ಎಚ್. ಮಲ್ಲಿಕಾರ್ಜುನ, ಶಿವಕುಮಾರ, ಪ್ರವೀಣ್, ಎಂಆರ್‌ಡಬ್ಲೂö್ಯ ಆರ್. ಧನರಾಜ್ ಕೆ. ಜುಂಜಪ್ಪ ಇತರರು ಹಾಜರಿದ್ದರು.

