ವಿಜಯಸಿರಿನ್ಯೂಸ್.ಕಾಂ/ ಹರಪನಹಳ್ಳಿ
ಕರ್ನಾಟಕ ಜ್ಞಾನವಿಜ್ಞಾನ ಸಮಿತಿ(ಕೆಜಿವಿಎಸ್) ತಾಲ್ಲೂಕು ಘಟಕಕ್ಕೆ ನೂತನ ಪದಾಧಿಕಾರಿಗಳು ಆಯ್ಕೆಯಾಗಿದ್ದಾರೆ.
ತಾಲ್ಲೂಕಿನ ಹುಲಿಕಟ್ಟೆ ಪ್ರಾಥಮಿಕ ಶಾಲೆಯ ಶಿಕ್ಷಕ ಸಾರಥಿ ಹನುಮಂತಪ್ಪ(ಅಧ್ಯಕ್ಷ) , ನಾಗತಿಕಟ್ಟೆ ಪ್ರಾಥಮಿಕ ಶಾಲೆಯ ಶಿಕ್ಷಕ ರುದ್ರೇಶ್ ಆರ್.(ಪ್ರಧಾನ ಕಾರ್ಯದರ್ಶಿ) ಹಾಗೂ ಮಾಚಿಹಳ್ಳಿ ಕೊರಚರಹಟ್ಟಿ ಪ್ರಾಥಮಿಕ ಶಾಲೆಯ ಶಿಕ್ಷಕ ವೆ.ಕೆ.ಡಿ. ಸಂತೋಷ್‍ಕುಮಾರ್ (ಖಜಾಂಚಿ) ಆಗಿ ಆಯ್ಕೆಯಾಗಿದ್ದಾರೆ.
ಆಯ್ಕೆಯಾದ ಎಲ್ಲಾ ಪದಾಧಿಕಾರಿಗಳಿಗೆ ಪ್ರಗತಿಪರ ಶಿಕ್ಷಕ ವೇದಿಕೆಯ ಎಲ್ಲಾ ಪದಾಧಿಕಾರಿಗಳು ಹಾಗೂ ಕನ್ನಡ ಜಾಗೃತಿ ಜಿಲ್ಲಾ ಸಮಿತಿ ಸದಸ್ಯ ಬಸವರಾಜ ಸಂಗಪ್ಪನವರ್ ಸೇರಿದಂತೆ ಹಲವರು ಅಭಿನಂದಿಸಿದ್ದಾರೆ.

